BJP ನಿರಂತರವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುಕ್ಕೆ ಇಡೀ ದೇಶ ಸಾಕ್ಷಿಯಾಗಿದೆ: ಸಿ.ಎಂ.ಸಿದ್ದರಾಮಯ್ಯ
KPCC ಕಚೇರಿಯಲ್ಲಿ ನಡೆದ AICC ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮದವರಿಗೆ ನೀಡಿದ ಮಾಹಿತಿಯ ಹೈಲೈಟ್ಸ್ ಗಳಿವು.
ಕಾಂಗ್ರೆಸ್ ಪಕ್ಷದ ಎಲ್ಲಾ ರಾಜ್ಯ ಮತ್ತು ರಾಷ್ಟ್ರೀಯ OBC ನಾಯಕರ ಇವತ್ತಿನ ಮೊದಲ ಸಭೆ ಅರ್ಥಪೂರ್ಣವಾಗಿ ನಡೆದಿದೆ.
ನನ್ನ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಸುವಂತೆ ಸಲಹಾ ಸಮಿತಿ ಅಧ್ಯಕ್ಷರು ಸೂಚಿಸಿದ್ದರಿಂದ ನನ್ನ ಅಧ್ಯಕ್ಷತೆಯಲ್ಲೇ ಸಭೆ ನಡೆದಿದೆ