ಬೆಂಗಳೂರು: ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿದ್ದು, ಜು.21 ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ರ್ಯಾಗಿಂಗ್, ಡ್ರಗ್ಸ್ ತಡೆ ಸೇರಿದಂತೆ ವಿವಿಧ ಕಾರಣಕ್ಕೆ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯ. ಹೀಗಾಗಿ, ಜು. 21 ರೊಳಗೆ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

