ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನಿಯೋಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದಲ್ಲಿ ಗೃಹಸಚಿವರಿಗೆ ದೂರು ನೀಡಿದೆ.
ಸಿಎಂ ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಕೊಲೆ ಮಾಡಿಸಿದ್ದಾರೆ ಎಂಬ ಹೇಳಿಕೆ ಮೇಲೆ ಮತ್ತು ಇದನ್ನು ಬಿಜೆಪಿ ನಾಯಕರು ರಾಜಕೀಯಕ್ಕೆ ಬಳಸುತ್ತಿರುವ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಮತ್ತು ಕಾಂಗ್ರೆಸ್ ನಾಯಕರ ನಿಯೋಗ ದೂರು ನೀಡಿತು.
ನಿಯೋಗ ಗುರುವಾರ ಕಾನೂನು ಸಚಿವರನ್ನು ಭೇಟಿ ಮಾಡಿ ಕ್ರಮಕ್ಕೆ ಮನವಿ ಮಾಡಲಿದ್ದು, ಬಿಜೆಪಿ ನಾಯಕರ ವಿವಾದಾತ್ಮಕ ಹೇಳಿಕೆ ವಿರುದ್ಧ ಕ್ರಮ ವಹಿಸಲು ಮನವಿ ಮಾಡಿಕೊಳ್ಳಲಿದೆ.
