ಬೆಂಗಳೂರು: ದಲಿತ ಸಮುದಾಯಗಳ ಅಭಿವೃದ್ಧಿ ಗಾಗಿ ಮೀಸಲಿಟ್ಟಿರುವ ಎಸ್ ಸಿಪಿ/ ಟಿಎಸ್ ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.
ಸರಕಾರವೇ ನೀಡಿರುವ ಅಂಕಿ- ಅಂಶಗಳ ಪ್ರಕಾರ 25 ಸಾವಿರ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗಿದೆ. ಆ ಮೂಲಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರವೇ ತಂದಿದ್ದ ಯೋಜನೆಯ ನಿಯಮ ಉಲ್ಲಂಘನೆ ಮಾಡಲಾಗಿದೆ. ಈ ಕುರಿತು ಇದೀಗ ವ್ಯಾಪಕ ಆಕ್ರೋಶ ಕೇಳಿಬಂದಿದ್ದು, ಗ್ಯಾರಂಟಿ ಯೋಜನೆ ಜಾರಿಗಾಗಿ ದಲಿತರಿಗೆ ಮೋಸ ನಡೆಯುತ್ತಿದೆ ಎಂದು ದಲಿತ ಮುಖಂಡರು ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರೇ ಸ್ವತಃ ದಲಿತ ಸಮುದಾಯಗಳಿಗೆ ಮೀಸಲಿಟ್ಟ ಅನುಮಾನಗಳನ್ನು ಬೇರೆಡೆಗೆ ಬಳಸುವಂತಿಲ್ಲ ಎಂದು ಅನೇಕ ಬಾರಿ ಹೇಳಿದ್ದರು. ಆದರೆ, ಇದೀಗ ತಮ್ಮ ನೇತ್ರತ್ವದಲ್ಲಿ ನಡೆದಿರುವ ಈ ಹಗರಣಕ್ಕೆ ಏನು ಉತ್ತರ ಕೊಡುತ್ತಾರೆ ಎಂದು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಗ್ಯಾರಂಟಿ ಯೋಜನೆಗಳು ದಲಿತರಿಗೆ ಮಾತ್ರ ಸೀಮಿತವಾಗಿಲ್ಲ. ಗ್ಯಾರಂಟಿ ಕೊಟ್ಟಿದ್ದೇವೆ ಎಂದು ದಲಿತರ ಅಭಿವೃದ್ಧಿ ಕುಂಠಿತಗೊಳಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.
