ಬೆಂಗಳೂರು : ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಸರಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್ ಅವರನ್ನು ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ಎಂ.ಟಿ.ರೇಜು ಅವರನ್ನು ಆರ್ಥಿಕ ಇಲಾಖೆ ಕಾರ್ಯದರ್ಶಿಯಾಗಿ ಹಾಗೂ ಟಿ.ಎಚ್.ಎಂ.ಕುಮಾರ್ ಅವರನ್ನು ವಸತಿ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

