ರಾಜಕೀಯ ಸುದ್ದಿ

ಒಂದು ರಾಷ್ಟ್ರ, ಒಂದು ಚುನಾವಣೆ; ಇದು ಬಿಜೆಪಿಯ ರಾಜಕೀಯ ನಿರ್ಧಾರ: ಡಿಸಿಎಂ ಡಿ.ಕೆ. ಶಿವಕುಮಾರ್

Share It

ದೆಹಲಿ:

“ಒಂದು ರಾಷ್ಟ್ರ, ಒಂದು ಚುನಾವಣೆ ಬಿಜೆಪಿಯವರ ರಾಜಕೀಯ ನಿರ್ಧಾರ. ದೇಶದ ಹಿತಾಸಕ್ತಿಯ ದೃಷ್ಟಿಯಿಂದ ಮತ್ತು ಪ್ರಾಯೋಗಿಕವಾಗಿ ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು “ಈ ಹಿಂದೆಯೇ ಈ ಪ್ರಸ್ತಾವನೆ ಇತ್ತಾದರೂ, ಸ್ಥಳೀಯ ಒಕ್ಕೂಟ ವ್ಯವಸ್ಥೆಯಲ್ಲಿ ಯಾವುದೇ ಸರ್ಕಾರವನ್ನೂ ಅವಧಿ ಮುಗಿಯುವವರೆಗೂ ಮುಂದುವರೆಸಿ ಎಂದು ಯಾರನ್ನೂ ಬಲವಂತ ಮಾಡಲು ಸಾಧ್ಯವಿಲ್ಲ. ಮುಂದೆ ಏನಾಗುತ್ತದೆ ಎಂದು ಕಾದು ನೋಡೋಣ. ಕಾಂಗ್ರೆಸ್ ಪಕ್ಷಕ್ಕೆ ಈ ನಿರ್ಧಾರವನ್ನು ಒಪ್ಪುವುದಿಲ್ಲ” ಎಂದು ಹೇಳಿದರು.


Share It

You cannot copy content of this page