ಬೆಂಗಳೂರು: ಗುಲಾಬಿ ಮಾರ್ಗದ (Pink Line) ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ- ಸುದ್ದುಗುಂಟೆಪಾಳ್ಯ ಮೆಟ್ರೋ ನಿಲ್ದಾಣ, ಜೆಪಿ ನಗರ 4ನೇ ಹಂತದ ಮೆಟ್ರೋ ನಿಲ್ದಾಣಕ್ಕೆ- ಎನ್.ಎಸ್ ಪಾಳ್ಯ ಮೆಟ್ರೋ ನಿಲ್ದಾಣ, IIMB ಮೆಟ್ರೋ ನಿಲ್ದಾಣಕ್ಕೆ ಬಿಳೇಕಹಳ್ಳಿ – IIMB ಮೆಟ್ರೋ ನಿಲ್ದಾಣ ಎಂದು ನಾಮಕರಣ ಮಾಡುವಂತೆ ರಾಮಲಿಂಗಾ ರೆಡ್ಡಿ ಅವರ ನೇತೃತ್ವದಲ್ಲಿ ಸರ್ವ ಪಕ್ಷ ನಿಯೋಗ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿತು.
ಜಿಬಿಎ ಸಚಿವರಾದ ಕೃಷ್ಣಭೈರೇ ಗೌಡ, ಸಂಸದರಾದ ತೇಜಸ್ವಿ ಸೂರ್ಯ ಶಾಸಕರಾದ ಸತೀಶ್ ರೆಡ್ಡಿ, ಉದಯ್ ಗರುಡಾಚಾರ್, ಎಂ. ಕೃಷ್ಣಪ್ಪ ಅವರನ್ನು ಒಳಗೊಂಡ ನಮ್ಮ ಸಮಿತಿ ವತಿಯಿಂದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ (BMRCL) ಮೂಲಕ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಅಧಿಕೃತವಾಗಿ ಮನವಿ ಸಲ್ಲಿಸಲಾಗಿದೆ.
ಕೇಂದ್ರ ಸಚಿವಾಲಯದಿಂದ ಅಗತ್ಯ ಅನುಮೋದನೆ ದೊರೆತು ಈ ಹೆಸರುಗಳು ಶೀಘ್ರ ಅನುಷ್ಠಾನಗೊಳ್ಳುತ್ತದೆ ಎಂಬ ನಂಬಿಕೆಯಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
