ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ.
ಶನಿವಾರ ಮುನಿರತ್ನ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್. ಮುನಿರತ್ನ ಅವರನ್ನು ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ರೆಸಾರ್ಟ್‌ನಲ್ಲಿ ಘಟನೆ ನಡೆದಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಶುಕ್ರವಾರ ಬಂಧಿಸಲಾಗಿತ್ತು.
ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾರೆ.
ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದೆ
