ರಾಜಕೀಯ ಸುದ್ದಿ

ಸೋಮವಾರ ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ ವಿಶೇಷ ರೈಲಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ

Share It

ಬೆಳಗಾವಿ : ಕೇಂದ್ರ ಸರ್ಕಾರದ ರೈಲ್ವೆ ಖಾತೆ ರಾಜ್ಯ ಸಚಿವ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ಅವರು ಬೆಳಗಾವಿ ಪ್ರವಾಸ ಕೈಗೊಳ್ಳಲಿದ್ದಾರೆ.

ಸೆ.16 ರಂದು ಬೆಳಗ್ಗೆ 8.35 ಗಂಟೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ 10 ಗಂಟೆಗೆ ರಸ್ತೆಯ ಮೂಲಕ ಕೊಲ್ಲಾಪುರದ ಮಹಾಲಕ್ಷ್ಮೀ ದೇವರ ದರ್ಶನ ಪಡೆದು ಕೊಲ್ಹಾಪುರದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಂತರ ಬೆಳಗಾವಿ ನಗರದ ರೈಲ್ವೆ ನಿಲ್ದಾಣದಲ್ಲಿ ರಾತ್ರಿ 8.00 ಗಂಟೆಗೆ (ಪುಣೆ – ಹುಬ್ಬಳ್ಳಿ) ವಂದೇ ಭಾರತ ವಿಶೇಷ ರೈಲಿಗೆ ಚಾಲನೆ ನೀಡಲಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share It

You cannot copy content of this page