ಬೆಂಗಳೂರು: ನಾಲ್ವರು ಆಗಂತುಕತು ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚುರಿವ ಘಟನೆ ರಾಜಧಾನಿಯಲ್ಲಿ ನಡೆದಿದೆ.
ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್.ಎಂ.ಟಿ.ಲೇಔಟ್ ನಲ್ಲಿ ರಸ್ತೆಯ ಬದಿಯಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಉತ್ತರ ಭಾರತ ಮೂಲದ ಯುವಕರ ಬೈಕ್ ಗಳನ್ನೇ ಟಾರ್ಗೆಟ್ ಮಾಡಿ ಬೈಕ್ ಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಲಾಗಿದೆ. ಬುಲೆಟ್ ಬೈಕ್ ವೊಂದರಿಂದ ಪೆಟ್ರೋಲ್ ತೆಗೆದು, ಅನಂತರ ಅದನ್ನೇ ಬೆಂಕಿ ಹಚ್ಚಲು ಬಳಸಿರುವ ದೃಶ್ಯ ಸೆರೆಯಾಗಿದೆ.
ಕಿಡಿಗೇಡಿಗಳ ಕೃತ್ಯಕ್ಕೆ ಒಂದು ಬುಲೆಟ್ ಸೇರಿದಂತೆ ಮೂರು ಬೈಕ್ ಗಳು ಸುಟ್ಟು ಕರಕಲಾಗಿವೆ. ಪ್ರಕರಣದ ಸಂಬಂಧ ಪೀಣ್ಯ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಕಿಡಿಗೇಡಿಗಳ ಪತ್ತೆಗೆ ಬಲೆಬೀಸಿದ್ದಾರೆ.