ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್; ಮೂವರಿಗೆ ಜಾಮೀನು ಮಂಜೂರು

Share It

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ.

ಕೇಶವಮೂರ್ತಿಗೆ ಹೈಕೋರ್ಟ್‌ನಿಂದ ಮೊದಲು ಜಾಮೀನು ದೊರಕಿದೆ. ಬಳಿಕ ಕಾರ್ತಿಕ್‌ ಮತ್ತು ನಿಖಿಲ್‌ ನಾಯಕ್‌ಗೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ.

ಈ ಪ್ರಕರಣದಲ್ಲಿ ಕಾರ್ತಿಕ್‌, ಕೇಶವ್‌ಮೂರ್ತಿ, ನಿಖಿಲ್‌ ನಾಯಕ್‌ ಕ್ರಮವಾಗಿ ಎ 15, ಎ16, ಎ17 ಆರೋಪಿಗಳಾಗಿದ್ದರು.

ಈ ಮೂವರು ರೇಣುಕಾಸ್ವಾಮಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ತನಿಖೆ ವೇಳೆ ಆರೋಪಿಗಳು ನೇರವಾಗಿ ಕೊಲೆಯಲ್ಲಿ ಭಾಗಿಯಾಗಿಲ್ಲ.

ಸಾಕ್ಷಿನಾಶ ಮಾಡಲು ಮುಂದಾಗಿದ್ದ ವಿಚಾರ ಬೆಳಕಿಗೆ ಬಂದಿತ್ತು. ಹೀಗಾಗಿ ಪೊಲೀಸರು ಸಾಕ್ಷ್ಯನಾಶ ಆಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಕೊಲೆಯಲ್ಲಿ ನೇರವಾಗಿ ಭಾಗಿಯಾಗದ ಕಾರಣ ಮೂವರಿಗೆ ಮಂಗಳವಾರ ಜಾಮೀನು ಸಿಕ್ಕಿದೆ.


Share It

You cannot copy content of this page