ಬೆಂಗಳೂರು: ಸರ್ಕಾರವನ್ನು ಅಸ್ಥಿರಗೊಳಿಸುವ ರಾಜ್ಯಪಾಲರ ಪ್ರಯತ್ನ ಹಾಗೂ ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೆ ಇಲ್ಲ.ಎಂದು ಕಾಂಗ್ರೆಸ್ ಎಕ್ಸ್ ನಲ್ಲಿ ಪೊಸ್ಟ್ ಹಂಚಿಕೊಂಡಿದೆ.
ರಾಜ್ಯಪಾಲರು ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ದೂರುಗಳನ್ನು ಮುಚ್ಚಿಡಲು ಪ್ರಯತ್ನಸಿದ್ದು, ಜಗಜ್ಜಾಹಿರಾಗಿದೆ. ಈ ಬಗ್ಗೆ ದೂರುಗಳು ಹೇಗೆ ಸೋರಿಕೆಯಾದವು ಎಂದು ರಾಜ್ಯಪಾಲರ ಪ್ರಶ್ನೆಯೇ ಅವರ ತಾರತಮ್ಯದ ರಾಜಕೀಯಕ್ಕೆ ಪುರಾವೆ ಒದಗಿಸುತ್ತದೆ ಎಂದು ಹೇಳಿದೆ.
ಬಿಜೆಪಿ ಕೂಡ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಸಿಎಂ ಹುದ್ದೆಗೆ ರಾಜೀನಾಮೆ ನೀಡುವಂತೆ ಒತ್ತಾಯ ಮಾಡಿದೆ.

