ಮಹಾಲಕ್ಷ್ಮಿ ಕೊಲೆ ಆರೋಪಿ‌ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ 59 ಪೀಸ್ ಮಾಡಿರುವ ಕುರಿತು ಉಲ್ಲೇಖ

Share It

ಬೆಂಗಳೂರು: ವೈಯಾಲಿಕಾವಲ್ ನ ಪೈಪ್ ಲೈನ್ ರಸ್ತೆಯ ಮನೆಯೊಂದರ ಫ್ರಿಡ್ಜ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಎಂಬಾಕೆಯ ದೇಹ ತುಂಡು ತುಂಡು ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಡೆತ್ ನೋಟ್ ನಲ್ಲಿ ಸೆಪ್ಟಂಬರ್ 3ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿದ್ದೇನೆ ಎಂದು ರಂಜನ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾನೆ. ಸೆ.3ರಂದು ಆಕೆಯ ಮನೆಗೆ ಹೋದಾಗ ಕೃತ್ಯ ಎಸಗಿದ್ದಾಗಿ ಬರೆದಿದ್ದಾನೆ. ವೈಯಕ್ತಿಕ ವಿಚಾರಗಳಿಗೆ ಆಕೆ ಜೊತೆ ಜಗಳವಾಗಿದ್ದು, ಆಗ ಆಕೆ ಹಲ್ಲೆ ನಡೆಸಿದಳು, ಇದರಿಂದ ಕೋಪಗೊಂಡು ಆಕೆಯನ್ನು ಕೊಂದೆ. ಆ ಬಳಿಕ 59 ಪೀಸ್ ಮಾಡಿ ಫ್ರಿಡ್ಜ್‌ನಲ್ಲಿ ಇರಿಸಿದ್ದೆ. ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆ ಎಂದು ಡೆತ್ ನೋಟ್​ನಲ್ಲಿ ಬಹಿರಂಗಪಡಿಸಿದ್ದಾನೆ.

ಮಹಿಳೆ ಕೊಲೆ ಪ್ರಕರಣದಲ್ಲಿ ಒರಿಸ್ಸಾ ಮೂಲದ ಮುಕ್ತಿ ರಂಜನ್ ರಾಯ್ ಎಂಬಾತನ ಮೇಲೆ ಪೊಲೀಸರಿಗೆ ಅನುಮಾನ ಮೂಡಿತ್ತು. ಮಹಾಲಕ್ಷ್ಮಿ ಕೆಲಸ ಮಾಡ್ತಿದ್ದ ಮಾಲ್ ನಲ್ಲಿ ಸ್ಟೋರ್ ಮ್ಯಾನೇಜರ್ ಆಗಿದ್ದ ರಂಜನ್ ರಾಯ್ ಈ ಕೃತ್ಯ ಎಸಗಿರೊ ಶಂಕೆ ವ್ಯಕ್ತವಾಗಿತ್ತು.

ಆತನಿಗಾಗಿ ಹಲವು ಕಡೆ ಹುಡುಕಾಡಿದ್ದ ಪೊಲೀಸರಿಗೆ ಆತ ಓರಿಸ್ಸಾಗೆ ತೆರಳಿರೊ ಮಾಹಿತಿ ಸಿಕ್ಕಿತ್ತು. ಸಿಕ್ಕ ಮಾಹಿತಿ ಆಧರಿಸಿ ಒರಿಸ್ಸಾಗೆ ತೆರಳಿದ್ದ ಪೊಲೀಸರಿಗೆ ಈಗ ಶಾಕ್ ಆಗಿತ್ತು. ಆದರೆ ರಂಜನ್ ಡೆತ್ ನೋಟ್ ಬರೆದಿಟ್ಟು ಸ್ಮಶಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹ್ಯಾಕ್ಸಲ್ ಬ್ಲೇಡ್ ನಿಂದ ದೇಹ ಕತ್ತರಿಸಿದ್ದ ಹಂತಕ
ಆರೋಪಿ ರಂಜನ್ ಮೊದಲು ಮಹಾಲಕ್ಷ್ಮಿಯನ್ನ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಆಕೆಯನ್ನ ಹ್ಯಾಕ್ಸಲ್ ಬ್ಲೇಡ್ ನಿಂದ ಕತ್ತರಿಸಿದ್ದ. ಬಾತ್ ರೂಂನಲ್ಲಿ ಆಕೆ ದೇಹವನ್ನ ಪೀಸ್ ಪೀಸ್ ಮಾಡಿದ್ದ. ನಂತರ ಫ್ರಿಡ್ಜ್ ಗೆ ಮೃತದೇಹ ತುಂಬಿದ್ದ. ಸಾಕ್ಷಿ ನಾಶಪಡಿಸಲು ಬಾತ್ ರೂಂನಲ್ಲಿ ಆ್ಯಸಿಡ್ ಹಾಕಿ ಕ್ಲೀನ್ ಮಾಡಿದ್ದ ಎಂದು ತಿಳಿದುಬಂದಿದೆ.

ಮುಕ್ತಿರಂಜನ್ ರಾಯ್ ಆತ್ಮಹತ್ಯೆ ಕುರಿತು ದುಶಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒರಿಸ್ಸಾಗಿ ತೆರಳಿದ್ದ ಬೆಂಗಳೂರು ಪೊಲೀಸರು ಈ ಬಗ್ಗೆ ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ.


Share It

You May Have Missed

You cannot copy content of this page