ಬೆಂಗಳೂರು: ರಾಜ್ಯಪಾಲರು ಮೇಲಿಂದ ಮೇಲೆ ಅಸಹನೀಯ ವರ್ತನೆಯಲ್ಲಿ ಪತ್ರ ಬರೆಯುತ್ತಿದ್ದಾರೆ. ತಕ್ಷಣವೇ ಮಾಹಿತಿ ಕೇಳುತ್ತಿದ್ದಾರೆ. ಹೀಗಾಗಿ, ಅಧಿಕಾರಿಗಳು ಯಾವುದೇ ಮಾಹಿತಿಯನ್ನು ನೀಡದಂತೆ ಸರಕಾರ ತೀರ್ಮಾನಿಸಿದೆ.
ಸಚಿವ ಸಂಪುಟ ಸಭೆಯಲ್ಲಿ ಇಂತಹ ಮಹತ್ವದ ನಿರ್ಣಯ ತೆಗೆದುಕೊಂಡಿದ್ದು, ರಾಜ್ಯಪಾಲರ ನಡೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಕೇಳಿದ ಯಾವುದೇ ಮಾಹಿತಿಯನ್ನು ಅಧಿಕಾರಿಗಳು ನೇರವಾಗಿ ಕೊಡಬಾರದು ಎಂದು ತಾಕೀತು ಮಾಡಲಾಗಿದೆ.
ಎಲ್ಲ ನಿಯಾಮವಳಿ ಪರಿಶೀಲನೆ ಮಾಡಿ ಸಂಪುಟ ಯಾವುದೇ ಮಾಹಿತಿಯನ್ನು ರಾಜ್ಯಪಾಲರಿಗೆ ಕಳುಹಿಸುವ ಸಂದರ್ಭದಲ್ಲಿ ಕ್ಯಾಬಿನೆಟ್ ಮುಂದೆ ತಂದು ಒಪ್ಪಿಗೆ ಪಡೆಯಲು ಸೂಚನೆ ನೀಡಲಾಗಿದೆ.
ಈ ನಿಟ್ಟಿನಲ್ಲಿ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿರುವ ಸಚಿವ ಸಂಪುಟ, ತಮ್ಮ ಗಮನಕ್ಕೆ ಬರತೆ ಯಾವುದೇ ಮಾಹಿತಿಯನ್ನು ರಾಜಭವನದ ಜತೆಗೆ ಹಂಚಿಕೊಳ್ಳದಂತೆ ಸೂಚನೆ ನೀಡಿದೆ.