ರಾಜಕೀಯ ಸುದ್ದಿ

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ನಾಯಕ ಕೆ.ಬಿ‌‌ ಕೋಳಿವಾಡ

Share It

ಬೆಂಗಳೂರು: ಮುಡಾ ಹಗರಣದ ಹೈಕೋರ್ಟ್ ತೀರ್ಪು ಹೊರಬಿದ್ದ ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಹ ಮುಡಾ ತನಿಖೆಗೆ ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್ಪಿಗೆ ಆದೇಶಿಸಿದೆ.

ಇದೀಗ ಮುಡಾ ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ ವ್ಯಕ್ತವಾಗಿದೆ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ ಒತ್ತಾಯಿಸಿದ್ದಾರೆ.

ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲೂ ವಿಚಾರ ಪ್ರಸ್ತಾಪಿಸಿದ ಸಿಎಂ ವಿಪಕ್ಷಗಳು ಮಾತನಾಡುತ್ತಿವೆ. ಈ ಪಕ್ಷಕ್ಕೆ ಮುಜುಗರ ಆಗುತ್ತಿದೆ. ಆದ್ದರಿಂದ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕೋಳಿವಾಡ ಸಲಹೆ ನೀಡಿದರು.

ತನಿಖೆ ಎದುರಿಸಿ ಸಿಎಂ ನಿಷ್ಕಳಂಕಿತರು ಸಾಬೀತಾದ ಮೇಲೆ ಮತ್ತೆ ಅವರೇ ಮುಖ್ಯಮಂತ್ರಿ ಆಗಲಿ. ಸಿಎಂ ರಾಜೀನಾಮೆ ಕೊಡಲ್ಲ ಎನ್ನುತ್ತಿದ್ದಾರೆ ಅವರ ಅಭಿಪ್ರಾಯ. ಅವರು ರಾಜೀನಾಮೆ ಕೊಡಬೇಕು ಎಂಬುದು ನಮ್ಮ ಅಭಿಪ್ರಾಯ ಎಂದು ಕೋಳಿವಾಡ ಸಲಹೆ ನೀಡಿದರು.

ನನಗೂ ಸಿಎಂ ಸಿದ್ದರಾಮಯ್ಯ ನಡುವೆ ಹಿಂದೆ ಭಿನ್ನಾಭಿಪ್ರಾಯ ಇದ್ದರೂ ಈಗ ಆತ್ಮೀಯವಾಗಿ ಇದ್ದೇವೆ. ಆದರೂ ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕು ಅನ್ನೋದು ನನ್ನ ಅಭಿಪ್ರಾಯ. ನನ್ನ ಜೊತೆ ಬೇರೆ ಯಾವ ನಾಯಕರು ಇಲ್ಲ. ನನ್ನ ವೈಯಕ್ತಿಕ ಅಭಿಪ್ರಾಯ ನಾನು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ರಾಜೀನಾಮೆ ಕೊಡದಿದ್ದರೆ, ರಾಜೀನಾಮೆ ಕೇಳುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಮುಂದೆ ಬಿಟ್ಟಿದ್ದು. ಈಗ ಅವರು ರಾಜೀನಾಮೆ ನೀಡಿ ತನಿಖೆ ಎದುರಿಸಿ ನಂತರ ತಪ್ಪಿಲ್ಲ ಅಂದರೆ ಅವರಿಗೆ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಅವರು ಸಲಹೆ ನೀಡಿದರು.


Share It

You cannot copy content of this page