ಅಪರಾಧ ಸುದ್ದಿ

ನಾಗಮಂಗಲ ಗಲಭೆ ಆರೋಪಿಗಳಿಗೆ ಜಾಮೀನು ಮಂಜೂರು

Share It

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿದ್ದ ಕೋಮುಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 55 ಆರೋಪಿಗಳಿಗೆ ಮಂಡ್ಯ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ನಿಂದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ಸೋಮವಾರ ಆರೋಪಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಸೆ. 11ರಂದು ಆರೋಪಿಗಳನ್ನು ಬಂಧಿಸಲಾಗಿತ್ತು.

ನಾಗಮಂಗಲದಲ್ಲಿ ಗಣೇಶನ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ಉಂಟಾಗಿ ನಾಗಮಂಗಲ ಹೊತ್ತಿ ಉರಿದಿತ್ತು. ಕಿಡಿಗೇಡಿಗಳು ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದರು.


Share It

You cannot copy content of this page