ರಾಜಕೀಯ ಸುದ್ದಿ

ಮೂಡಾ ಪ್ರಕರಣದ ನ್ಯಾಯಾಂಗ ನಿಂದನೆ; ಸಚಿವ ಜಮೀರ್ ಅಹ್ಮದ್ ಗೆ ಸಂಕಷ್ಟ

Share It

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಹೈಕೋರ್ಟ್​ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.
ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್​ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ತೀರ್ಪು ವಿರುದ್ಧ ಸಚಿವ ಜಮೀರ್​ ಅಹ್ಮದ್​ ಖಾನ್​ ಲಘುವಾಗಿ ಮಾತನಾಡಿದ್ದರು. ಸಿದ್ದರಾಮಯ್ಯ ಅವರ ವಿರುದ್ಧ ​ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.
ಸಚಿವ ಜಮೀರ್ ಅಹ್ಮದ್​ ಖಾನ್ ಅವರು ಹೈಕೋರ್ಟ್​ ಆದೇಶ ರಾಜಕೀಯ ತೀರ್ಪು ಎಂದು ಹೇಳಿಕೆ ನೀಡಿದ್ದರು. ಇದು ಜಮೀರ್ ಅಹ್ಮದ್​ ಖಾನ್ ಅವರಿ​ಗೆ ಸಂಕಷ್ಟ ತಂದೊಡ್ಡಿದೆ.


Share It

You cannot copy content of this page