ಹುಬ್ಬಳ್ಳಿ: ಕಿತ್ತೂರು ರಾಣಿ ಚೆನ್ನಮ್ಮ ಬ್ರಿಗೇಡ್ ಆರಂಭಿಸಲು ಸಜ್ಜಾಗಿರುವ ಕೆ.ಎಸ್. ಈಶ್ವರಪ್ಪ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಕೆ.ಎಸ್. ಈಶ್ವರಪ್ಪ, ಮಾಜಿ ಶಾಸಕ ಕೆ. ವಿರೂಪಾಕ್ಷಪ್ಪ, ಬಂಜಾರ ಸಮಾಜದ ರಾಜ್ಯಾಧ್ಯಕ್ಷ …ಸೇರಿ ಪ್ರಮುಖ ನಾಯಕರು ಭಾಗವಹಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿಯ ಟಿಕೆಟ್ ವಂಚಿತರಾಗಿ ಪಕ್ಷೇತರ ಸ್ಪರ್ಧೆ ಮಾಡಿದ್ದ ಕೆ.ಎಸ್.ಈಶ್ವರಪ್ಪ ಇದೀಗ ರಾಣಿ ಚೆನ್ನಮ್ಮ ಬ್ರಿಗೇಡ್ ಮೂಲಕ ಸಂಘಟನೆ ಮಾಡಲು ಹೊರಟಿದ್ದಾರೆ. ಈ ಹಿಂದೆ ರಾಯಣ್ಣ ಬ್ರಿಗೇಡ್ ಮಾಡಿ, ಕೆಲಕಾಲ ಸಂಘಟನೆ ಮಾಡಲಾಗಿತ್ತು.
ರಾಯಣ್ಣ ಬ್ರಿಗೇಡ್ ಹೊರತುಪಡಿಸಿ, ಇದೀಗ ರಾಣಿ ಚೆನ್ನಮ್ಮ ಹೆಸರಿನಲ್ಲಿ ಹಿಂದುಳಿದ ಸಮುದಾಯಗಳ ಸಂಘಟನೆ ಮಾಡುವ ಗುರಿಯನ್ನು ಹೊಂದಿರುವುದಾಗಿ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.