ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದವನಿಗೆ ಕಠಿಣ ಶಿಕ್ಷೆ ತೀರ್ಪು ಪ್ರಕಟ

Share It

ಬೆಳಗಾವಿ : ಕಿತ್ತೂರು ತಾಲೂಕು ತಿಗಡೊಳ್ಳಿ ಗ್ರಾಮದ ವ್ಯಕ್ತಿಯೊಬ್ಬ ಎಸಗಿದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಸಾಬೀತುಕೊಂಡಿರುವ ಹಿನ್ನೆಲೆಯಲ್ಲಿ ಆತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10,000 ₹ ದಂಡ ವಿಧಿಸಿ ಇಲ್ಲಿನ ವಿಶೇಷ ಶೀಘ್ರಗತಿ ನ್ಯಾಯಾಲಯ ಸೋಮವಾರದಂದು ಮಹತ್ವದ ತೀರ್ಪು ನೀಡಿದೆ.

ತಿಗಡೊಳ್ಳಿ ಗ್ರಾಮದ ಗಂಗಪ್ಪ ಕಲ್ಲಪ್ಪ ಕೋಲ್ಕಾರ ಎಂಬಾತನೇ ಶಿಕ್ಷೆಗೆ ಒಳಗಾದ ಅಪರಾಧಿ. ಬಾಲಕಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿದ್ದ ಈತನು, 2017 ರ ಸೆಪ್ಟೆಂಬರ್ ನಲ್ಲಿ ಬೈಕ್ ಮೇಲೆ ಅಪ್ರಾಪ್ತೆಯನ್ನು ಅಪಹರಿಸಿ ಮಹಾರಾಷ್ಟ್ರದ ತಾಸಗಾಂವ ಎಂಬಲ್ಲಿ ಬಿಲ್ಡಿಂಗ್ ನಲ್ಲಿ ಇರಿಸಿದ್ದ.

ಅಲ್ಲೇ ಮೇಲಿಂದ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ತನಿಖಾಧಿಕಾರಿ ರಾಘವೇಂದ್ರ ಹವಾಲ್ದಾರ್ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಈ ಮಹತ್ವದ ತೀರ್ಪನ್ನು ಪ್ರಕಟಿಸಿದ್ದಾರೆ.

ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಸರಕಾರದ ಪರ ವಿಶೇಷ ಅಭಿಯೋಜಕ ಎಲ್ .ವಿ.ಪಾಟೀಲ ವಾದ ಮಂಡಿಸಿದ್ದರು.


Share It

You May Have Missed

You cannot copy content of this page