ಉಪಯುಕ್ತ ಸುದ್ದಿ

ನಗರದಲ್ಲಿ ಗಣಪತಿ ಮೂರ್ತಿ ವಿಸರ್ಜನೆಗೆ 462 ಸಂಚಾರಿ ಟ್ಯಾಂಕರ್‌ ಸಿದ್ಧ

Share It

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಾದ್ಯಂತ ಗಣಪತಿ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ ಮಾಡಿದೆ. ಬಿಬಿಎಂಪಿಯು ಬೆಂಗಳೂರಿನಾದ್ಯಂತ ಗಣಪತಿ ಮೂರ್ತಿ ವಿಸರ್ಜನೆಗೆ 462 ಸಂಚಾರಿ ಟ್ಯಾಂಕರ್‌ಗಳನ್ನು ಸಿದ್ಧಪಡಿಸಿದೆ.
ಸಾರ್ವಜನಿಕರು ಇದರ ಸೌಲಭ್ಯ ಪಡೆದುಕೊಂಡು ಟ್ಯಾಂಕರ್ ಗಳಲ್ಲಿ ಮೂರ್ತಿಗಳನ್ನು ವಿಸರ್ಜನೆ ಮಾಡಬಹುದು.

ಅಥವಾ ಪಾಲಿಕೆಯಿಂದ ಗುರುತಿಸಿರುವ ಕಲ್ಯಾಣಿ ಅಥವಾ ಕೆರೆಗೆ ವಿಸರ್ಜನೆ ಮಾಡಬಹುದು ಎಂದು ಬಿಬಿಎಂಪಿ ತಿಳಿಸಿದೆ. ಈ ಉದ್ದೇಶಕ್ಕಾಗಿ ಸುಮಾರು 41 ಕೆರೆಗಳನ್ನು ಗುರುತಿಸಲಾಗಿದೆ.

ಬೆಂಗಳೂರು ಪೂರ್ವ ವಲಯದಲ್ಲಿ 138 ಸಂಚಾರಿ ಟ್ಯಾಂಕರ್‌ಗಳ ವ್ಯವಸ್ಥೆ ಮಾಡಲಾಗಿದೆ. ಪಶ್ಚಿಮ ವಲಯದಲ್ಲಿ 84 ಹೆಚ್ಚಿನ ಟ್ಯಾಂಕರ್​ಗಳ ವ್ಯವಸ್ಥೆ ಮಾಡಲಾಗಿದೆ.


Share It

You cannot copy content of this page