ನಾವು ತಲ್ವಾರ್ ಹಿಡಿಯಬೇಕಾಗುತ್ತದೆ: ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ
ಮೈಸೂರು: ಮುಸ್ಲಿಮರ ಬಳಿ ಇರುವ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳದಿದ್ದರೆ ನಾವು ಗಣೇಶ ಮೆರವಣಿಗೆ ವೇಳೆ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.
ವಿವಿಧ ಜಿಲ್ಲೆಗಳಲ್ಲು ಗಣೇಶ ಮೆರವಣಿಗೆ ಅದ್ದೂರಿಯಾಗಿ ನಡೆಯುತ್ತದೆ. ರಾಜ್ಯ ಸರ್ಕಾರ ಮುಸ್ಲಿಂ ಪುಂಡರನ್ನು ನಿಯಂತ್ರಿಸದಿದ್ದರೆ ನಮ್ಮ ರಕ್ಷಣೆ ಬಗ್ಗೆ ನಮಗೆ ಗೊತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮುಡಾ ಹಗರಣ ವಿಚಾರ ಕೋರ್ಟ್‌ನಲ್ಲಿ ನಡೆಯುತ್ತಿದೆ. ವಾಲ್ಮೀಕಿ ಹಗರಣದಲ್ಲಿ ಸಿಎಂ ತಲೆದಂಡ ನಿಶ್ಚಿತವಾಗಿದೆ. ಸಿಎಂ ಅವರೇ 88 ಕೋಟಿ ರೂಪಾಯಿ ಅವ್ಯವಹಾರ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು.