ಬೆಂಗಳೂರು : ಸಾರ್ವಜನಿಕರು ಆಕ್ರೋಶಗೊಂಡರು ನಾನು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ನಡೆದ ಕಾವೇರಿ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಧ್ಯಮದವಾರಾಗಲಿ, ಸಾರ್ವಜನಿಕರಾಗಲಿ ಯಾರೇ ವಿರೋಧ ವ್ಯಕ್ತಪಡಿಸಲಿ, ವಿಪಕ್ಷಗಳು ಟೀಕಿಸಲಿ, ತಲೆಕೆಡಿಸಿಕೊಳ್ಳುವುದಿಲ್ಲ. ನೀರಿನ ದರ ಹೆಚ್ಚಳ ಮಾಡುತ್ತೇವೆ ಎಂದರು.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ನೀರಿನ ದರದ ಬಗ್ಗೆ ಮಾಹಿತಿ ಕೊಡಿ. ಎಷ್ಟು ವರ್ಷಗಳಿಂದ ನೀರಿನ ದರ ಹೆಚ್ಚಿಸಿಲ್ಲ ಎಂದು ಮಾಹಿತಿ ಕೊಡಿ ಎಂಬುದಾಗಿ ಜಲಸಂಪನ್ಮೂಲ ಸಚಿವರೂ ಹಾಗೂ ಉಪ ಮುಖ್ಯಮಂತ್ರಿ ಆಗಿರುವ ಡಿಕೆ ಶಿವಕುಮಾರ್ ವೇದಿಕೆ ಮೇಲೆಯೇ ಸಂಬಂದಿಸಿದ ಜಲಮಂಡಳಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

