ದಾಬಸ್ ಪೇಟೆ:ಲಾರಿ ರಿವರ್ಸ್ ತೆಗೆಯುವಾಗ ಬೈಕ್ ಗೆ ಡಿಕ್ಕಿ: ಚಿತ್ರದುರ್ಗದ ಯುವಕ ಸಾವು, ತಾಯಿ ಸ್ಥಿತಿ ಗಂಭೀರ
ನೆಲಮಂಗಲ: ರಿವರ್ಸ್ ತೆಗೆಯುತ್ತಿದ್ದ ಲಾರಿಗೆ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಬೈಕ್ ನಲ್ಲಿದ್ದ ಆತನ ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾಬಸ್ ಪೇಟೆಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕುಶಾಲ್ (20) ಹಾಗೂ ಆತನ ತಾಯಿ ಮಮತಾ(45) ತೆರಳುತ್ತಿದ್ದರು. ಡಾಬಸ್ ಪೇಟೆ ಸಮೀಪದಲ್ಲಿ ಲಾರಿಯೊಂದು ರಿವರ್ಸ್ ತೆಗೆಯುತ್ತಿದ್ದ ವೇಳೆ ಹಿಂದಿನಿಂದ ಬೈಕ್ ಡಿಕ್ಕಿಯಾಗಿದೆ.
ಲಾರಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆತನ ತಾಯಿಯ ಸ್ಥಿತಿಯೂ ಗಂಭೀರವಾಗಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದು ತನಿಖೆ ಮುಂದುವರಿಸಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯ ದಿಂದಲೇ ಘಟನೆ ಸಂಭವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.
ಕುಶಾಲ್ ಸಾವು, ತಾಯಿ ಮಮತಾ ಸ್ಥಿತಿ ಗಂಭೀರ
ಚಿತ್ರದುರ್ಗಕ್ಕೆ ಹೋಗಿತ್ತಿದ್ದ ತಾಯಿ ಮಗ
ಲಾರಿ ಚಾಲಕನ ನಿರ್ಲಕ್ಷ್ಯ
ನೆಲಮಂಗಲ ಸಂಚಾರಿ ಠಾಣೆಯಲ್ಲಿ ದೂರು ದಾಖಲು


