ರಾಜಕೀಯ ಸುದ್ದಿ

ಅಬಕಾರಿ ನೀತಿ ಅಕ್ರಮ ಕೇಸ್: ದೆಹಲಿ ಸಿಎಂ ಕೇಜ್ರಿವಾಲ್ ಜಾಮೀನು ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

Share It

ದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ತೀರ್ಪು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.

ಪ್ರಕರಣದ ವಿಚಾರಣೆ ವೇಳೆ “ಕಳೆದ 2 ವರ್ಷಗಳಲ್ಲಿ ಸಿಬಿಐ ನನ್ನನ್ನು ಬಂಧಿಸಲಿಲ್ಲ. ಆದರೆ, ಇಡಿ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕವೇ ನನ್ನನ್ನು ಬಂಧಿಸಿದೆ” ಎಂದು ಕೇಜ್ರಿವಾಲ್ ಪರ ವಕೀಲ ಅಭಿಷೇಜ್ ಮನು ಸಿಂಘ್ವಿ ವಾದಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಅದಾದ ಬಳಿಕ ಚುನಾವಣೆ ವೇಳೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್ ಕೇಜ್ರಿವಾಲ್ ಮತ್ತೆ ಜೂನ್ 2ರಂದು ಶರಣಾಗುವಂತೆ ಕೋರ್ಟ್ ತಿಳಿಸಿತ್ತು.

ಈಗಾಗಲೇ ಸಿಬಿಐ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ತಿಳಿಸಿದೆ.

ಅದಾದ ಬಳಿಕ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಅದಾದ ಬಳಿಕ ಮತ್ತೆ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದೆ. ಈ ವಿಚಾರಣೆಯ ತೀರ್ಪು ಮುಂದಿನ ಮಂಗಳವಾರ ಪ್ರಕಟವಾಗಲಿದೆ.

ಹೀಗಾಗಿ ಮಂಗಳವಾರ ಸೆಪ್ಟೆಂಬರ್ 10 ರಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ಇತ್ಯರ್ಥವಾಗಿ ಅವರಿಗೆ ಸುದೀರ್ಘ ಬಂಧನದ ಅವಧಿಯ ನಂತರ ಬಿಡುಗಡೆಯ ಭಾಗ್ಯ ಸಿಗುವುದೋ? ಅಥವಾ ಮತ್ತೆ ಜೈಲಿನಲ್ಲೇ ಇನ್ನಷ್ಟು ದಿನ ಇರಬೇಕಾ? ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ.


Share It

You cannot copy content of this page