ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನ ಖಂಡಿಸಿ ಇಂದು ಕಾಂಗ್ರೆಸ್ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸುತ್ತಿದೆ.
ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಬೃಹತ್ ಹೋರಾಟ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ನಡೆ ವಿರುದ್ದ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು, ಮುಖಂಡರು ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಧರಣಿ ನಡೆಸುತ್ತಿದ್ದಾರೆ. ಒಟ್ಟಾರೆಯಾಗಿ ಇಂದು ರಾಜ್ಯದ್ಯಂತ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನ ಖಂಡಿಸಿ ಕಾಂಗ್ರೆಸ್ ನಿಂದ ಆಕ್ರೋಶ ರಾಜ್ಯಾದ್ಯಂತ ವ್ಯಾಪಕವಾಗಿ ವ್ಯಕ್ತವಾಗಿದೆ.

