ಮುಡಾ ಹಗರಣ:ಇಂದು ಸಿಎಂ ಸಿದ್ದರಾಮಯ್ಯ ವಿಚಾರಣೆ
ಬೆಂಗಳೂರು: ಮುಡಾ ಹಗರಣದಲ್ಲಿ ಎ1 ಆಗಿರುವ ಸಿಎಂ ಸಿದ್ದರಾಮಯ್ಯ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್ ಕೊಟ್ಟಿದ್ದ ಹಿನ್ನೆಲೆಯಲ್ಲಿ ಇಂದು 10ಗಂಟೆಗೆ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ.
ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಕಚೇರಿಯಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಮೈಸೂರು ಸಿಟಿ ಕಮಿಷನರ್ ಸೀಮಾ ಲಾಟ್ಕರ್ ಮಂಗಳವಾರ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿ ನೂರಾರು ಬ್ಯಾರಿಕೇಡ್‌ಗಳನ್ನು ತರಿಸಿಕೊಂಡಿದ್ದಾರೆ.
ಈಗಾಗಲೇ ಮುಡಾ ಕೇಸ್ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ಸೇರಿ ಹಲವರ ವಿಚಾರಣೆ ನಡೆಸಿದ್ದಾರೆ.


