ಸುದ್ದಿ

ಹೆಚ್ಚಿದ ಆನೆ ಕಾಟಕ್ಕೆ ಶಾಲೆ, ಕಾಲೇಜುಗಳೇ ಬಂದ್

Share It

ಚಿಕ್ಕಮಗಳೂರು: ಜಿಲ್ಲೆಯ ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದರಿಂದ ವ್ಯಾಪ್ತಿಯ ಶಾಲೆ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದೆ.

11 ಗ್ರಾಮಗಳಲ್ಲಿ ನಿಷೇಧಾಜ್ಞೆ ಹೇರಿ ಜಿಲ್ಲಾಡಳಿತ ಭಾನುವಾರ ಆದೇಶ ಹೊರಡಿಸಿತ್ತು. ಸಂಭಾವ್ಯ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಜಿಲ್ಲೆಯ ವಸ್ತಾರೆ, ಮೂಗ್ತಿಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಹೀಗಾಗಿ ವಸ್ತಾರೆ, ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. 2 ಗ್ರಾಮ ಪಂಚಾಯಿತಿ ವ್ಯಾಪ್ತಿಯ 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಗ್ರಾಮಗಳಲ್ಲಿ ಶಾಲಾ‌, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾಡಾನೆಗಳ ಹಾವಳಿಗೆ ಕಾಫಿ, ಮೆಣಸು, ಬಾಳೆ ಬೆಳೆ ಸಂಪೂರ್ಣ ನಾಶವಾಗುತ್ತಿವೆ. ಸದ್ಯ ಮಾರಿಕಟ್ಟೆ ಗ್ರಾಮದ ಕಾಫಿತೋಟದಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ.

ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ ಓಡಾಟಕ್ಕೆ ನಿರ್ಬಂಧ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದರಿಂದ ವಿದ್ಯಾರ್ಥಿಗಳು ಹಾಗೂ ಶಾಲಾ ಕಾಲೇಜು ಸಿಬ್ಬಂದಿ ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.


Share It

You cannot copy content of this page