ಬೆಳಗಾವಿ: SCP/TSP ಅನುದಾನ ಸಮರ್ಕವಾಗಿ ಬಳಕೆಯಾಗುತ್ತಿಲ್ಲ ಎಂಬ ಕುರಿತು ಆರಂಭವಾದ ಚರ್ಚೆ, ಪಂಚಾಯತಿಗಳಲ್ಲಿ ಪ್ರತ್ಯೇಕ ಗ್ರಾಮ ಸಭೆ ನಡೆಸದಿರುವ ಕುರಿತ ಆಕ್ರೋಶಕ್ಕೆ ಕಾರಣವಾಯಿತು.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರೇ ಆದ ಜಕ್ಕಪ್ಪನವರ್ ದಲಿತರಿಗೆ ನೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರ್ಬಳಕೆಯಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶುರುವಾದ ಚರ್ಚೆಯಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷದ ನಾಯಕರೆಲ್ಲ ದನಿಗೂಡಿಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತಿ ಗಳಲ್ಲಿ ದಲಿತರ ಹಣ ಬಳಕೆಗೆ ಸಂಬಂಧಿಸಿದಂತೆ ಪ್ರತ್ಯೇಕ ಗ್ರಾಮ ಸಭೆಗಳನ್ನು ನಡೆಸಬೇಕು. ಆದರೆ, ಆ ರೀತಿ ಎಲ್ಲಿಯೂ ನಡೆಯುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು. ಈ ವೇಳೆ ಮಾತನಾಡಿದ ಸಚಿವ ಸಂತೋಷ್ ಲಾಡ್, 4032 ಗ್ರಾಮ ಪಂಚಾಯತಿ ಗಳಲ್ಲಿ ಪ್ರತ್ಯೇಕ ಗ್ರಾಮಸಭೆಗಳು ನಡೆದಿವೆ. ಉಳಿದ ಕಡೆ ಸಭೆ ನಡೆಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗುತ್ತದೆ ಎಂದರು.
