ಸುದ್ದಿ

CJI ಮೇಲೆ ಶೂ ಎಸೆತ : ರಾಕೇಶ್ ಕಿಶೋರ್ ಬಂಧನಕ್ಕೆ ಡಿ.ಎಸ್.ವೀರಯ್ಯ ಆಗ್ರಹ

Share It

ಬೆಂಗಳೂರು: ಸುಪ್ರೀಂ ನ್ಯಾಯಮೂರ್ತಿ ಅವರ ಮೇಲೆ ಶೂ ಎಸೆದ ರಾಕೇಶ್ ಕಿಶೋರ್ ವಿರುದ್ಧ ಎಫ್ಐಆರ್ ದಾಖಲಿಸಿ, ಆತನನ್ನು ಬಂಧಿಸಬೇಕೆಂದು ಆಗ್ರಹಿಸಿ ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಹುಜನ ಸಂಘರ್ಷ ಸಮಿತಿ ಕಾರ್ಯಕರ್ತರು ಟೌನ್ ಹಾಲ್ ನಿಂದ ಪ್ರತಿಭಟನೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿದರು. ಅನಂತರ ಎಡಿಸಿ ಅವರ ಮೂಲಕ ಮನವಿ ಪತ್ರ ಸಲ್ಲಿಕೆ ಮಾಡಲಾಯಿತು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದಿರುವುದು ಸಂವಿಧಾನಕ್ಕೆ ಮಾಡಿದ ಅವಮಾನ. ಆತನ ವಿರುದ್ಧ ಎಫ್ ಐಆರ್ ದಾಖಲಾಗಬೇಕು. ಅವನನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ. ರಾಜ್ಯಾದ್ಯಂತ ಹೋರಾಟಕ್ಕೆ ಬಹುಜನ ಸಂಘರ್ಷ ಸಮಿತಿ ಸಜ್ಜಾಗಲಿದೆ ಎಂದು ಡಿ.ಎಸ್. ವೀರಯ್ಯ ಎಚ್ಚರಿಕೆ ನೀಡಿದರು.

ಕರ್ನಾಟಕ ಬಹುಜನ ಸಂಘರ್ಷ ಸಮಿತಿಯ ಮುಖಂಡರು, ದಲಿತ ಹೋರಾಟಗಾರರು, ಕಾರ್ಯಕರ್ತರು ಸೇರಿದಂತೆ ನೂರಾರು ಜನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


Share It

You cannot copy content of this page