ಬೆಂಗಳೂರು: ನಗರ ಪೊಲೀಸ್ ಕಮಿಷನರ್ ಅವರ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಮಿತಿಯ ಉನ್ನತ ಮಟ್ಟದ ಸಭೆ ಜರುಗಿತು. ಈ ಸಭೆಯಲ್ಲಿ ಜಂಟಿ ಪೊಲೀಸ್ ಕಮಿಷನರ್ (ಸಂಚಾರ), ಜಂಟಿ ಕಮಿಷನರ್ (ಆರ್‌ಟಿಒ), ಬಿಬಿಎಂಪಿ ಜಂಟಿ ಕಮಿಷನರ್ ಹಾಗೂ ಬೆಂಗಳೂರು ಸಂಚಾರ ಪೊಲೀಸ್, ಆರ್‌ಟಿಒ, ಬಿಎಂಆರ್‌ಸಿಎಲ್ (ನಮ್ಮ ಮೆಟ್ರೋ), ಬಿಎಂಟಿಸಿ ಸೇರಿದಂತೆ ಪ್ರಮುಖ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ನಗರದಾದ್ಯಂತ ರಸ್ತೆ ಸುರಕ್ಷತಾ ಮೂಲಸೌಕರ್ಯಗಳನ್ನು ಬಲಪಡಿಸುವುದು, ಸಂಚಾರ ಮತ್ತು ಸಾರ್ವಜನಿಕರ ಸವಾಲುಗಳನ್ನು ಗುರುತಿಸುವುದು ಹಾಗೂ ಸುಗಮ ಸಂಚಾರ, ಸುರಕ್ಷತೆ ಮತ್ತು ಒಟ್ಟಾರೆ ಟ್ರಾಫಿಕ್ ನಿರ್ವಹಣೆಯನ್ನು ಸುಧಾರಿಸಲು ಎಲ್ಲಾ ಇಲಾಖೆಗಳ ನಡುವೆ ಸಮನ್ವಯದ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು.

