ನವದೆಹಲಿ: ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ ಪ್ರಕರಣಕ್ಕೆ ಸಂಬಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದು, ನೀಟ್ ಅಕ್ರಮದ ವಿರುದ್ಧ ಕಠಿಣ ತನಿಖೆ ನಡೆಸುವ ಭರವಸೆ ನೀಡಿದ್ದಾರೆ.
ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಮೋದಿ ಅವರು, ವಿದ್ಯಾರ್ಥಿಗಳ ಭವಿಷ್ಯ ಎಲ್ಲದಕ್ಕಿಂತ ಮುಖ್ಯವಾಗಿದ್ದು, ನೀಟ್ ಅಕ್ರಮದ ಕುರಿತು ಕಠಿಣ ಕ್ರಮ ಕೈಗೊಳ್ಳಲಾಗುವುದು. ಅದಕ್ಕೆ ಸಂಬಧಿಸಿದಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಅಂತಿಮ ನಿರ್ಧಾರ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ವಿದ್ಯಾರ್ಥಿಗಳ ಆಕ್ರೋಶಕ್ಕೆ ತಲೆಬಾಗಿರುವ ಮೋದಿ, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ. ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರಕಾರ ಬದ್ಧವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ.

