ಬಳ್ಳಾರಿ:ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಜೈಸಿಂಗಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ದುರ್ಮರಣಕ್ಕೀಡಾಗಿದ್ದಾರೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಅಪಘಾತದಲ್ಲಿ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಕೊಪ್ಪಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಡೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟಿಪ್ಪರ್ ಲಾರಿಯ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.