ಬಾಬಾ ಸತ್ಸಂಗದಲ್ಲಿ ಕಾಲ್ತುಳಿತಕ್ಕೆ ೨೭ ಮಂದಿ ದರ್ಮರಣ
ಹತ್ರಾಸ್: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ೨೭ ಮಂದಿ ದುರ್ಮರಣ ಹೊಂದಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದಿದೆ.
ಮಂಗಳವಾರ ಭೋಲೆ ಬಾಬಾ ಎಂಬವರ ಧಾರ್ಮಿಕ ಪ್ರವಚನ(ಸತ್ಸಂಗ) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಇದ್ದಕ್ಕಿದ್ದಂತೆ ಭಕ್ತಾಧಿಗಳು ಓಡತೊಡಗಿದೆ. ಇದರಿಂದಾಗಿ ಕಾಲ್ತುಳಿತ ಉಂಟಾಗಿ ಅನೇಕರು ಸಿಲುಕಿಕೊಂಡರು ಎನ್ನಲಾಗಿದೆ.
ಘಟನೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಜನರು ಗಾಯಗೊಂಡಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಈವರೆಗೆ ೨೭ ಮೃತದೇಹಗಳು ಇಟಾಹ್ ಜಿಲ್ಲೆಯ ಆಸ್ಪತ್ರೆಗೆ ತಲುಪಿರುವುದಾಗಿ ವರದಿಯಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.


