ಬೆಂಗಳೂರು : ನಟ ದರ್ಶನ್ ತೂಗುದೀಪ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ಸಿಸಿಬಿ ಜಂಟಿ ಆಯುಕ್ತ ಡಾ. ಚಂದ್ರಗುಪ್ತ ಅವರನ್ನು ನೇಮಿಸಿ ರಾಜ್ಯಸರ್ಕಾರ ನಿರ್ದೇಶಿಸಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್ ಅವರು ಕುಖ್ಯಾತ ಖೈದಿಗಳೊಂದಿಗೆ ಹರಟೆ ಹೊಡೆಯುತ್ತಾ ಕಾಫಿ, ಸಿಗರೇಟ್ ಸೇದುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ರಾಜ್ಯದಲ್ಲಿ ವಿವಾದ ಸೃಷ್ಟಿಸಿ ಭಾರಿ ಟೀಕೆಗೆ ಗುರಿಯಾಗಿತ್ತು.
ಈ ಬಗ್ಗೆ ಪರಪ್ಪನ ಅಗ್ರಹಾರ ಜೈಲಿನ 9 ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಲಾಗಿತ್ತು. ಜೊತೆಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಲಾಗಿದೆ.
ಆದಾಗ್ಯೂ ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಸಂಪೂರ್ಣ ವರದಿ ನೀಡುವಂತೆ ಇದೀಗ ರಾಜ್ಯಸರ್ಕಾರ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.