ಉಪಯುಕ್ತ ಸುದ್ದಿ

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಸರಕಾರದ ವಶಕ್ಕೆ: ತಪ್ಪಲ್ಲ ಎಂದ ಹೈಕೋರ್ಟ್

Share It

ಬೆಂಗಳೂರು: ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವನ್ನು ಸರಕಾರ ಮುಜರಾಯಿ ಇಲಾಖೆಗೆ ತೆಗೆದುಕೊಂಡಿರುವ ಕ್ರಮ ಸರಿಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಸರಕಾರ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭಾರಿ ಅವ್ಯವಹಾರ ನಡೆದಿದ್ದು ಪತ್ತೆಯಾಗಿತ್ತು. ಹೀಗಾಗಿ ಸರಕಾರ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಪಡೆದಿತ್ತು. ಈ ಆದೇಶವನ್ನು ಪ್ರಶ್ನಿಸಿ ದೇವಸ್ಥಾನದ ಆಡಳಿತ ಮಂಡಳಿ ಹೈಕೋರ್ಟ್ ಮೊರೆ ಹೋಗಿತ್ತು.

ಸರಕಾರದ ನಿರ್ಧಾರಕ್ಕೆ ತಡೆಯಾಜ್ಞೆ ನೀಡುವ ಮನವಿಯನ್ನು ಹೈಕೋರ್ಟ್ ನ್ಯಾಯಪೀಠ ತಿರಸ್ಕರಿಸಿದ್ದು, ದೇವಸ್ಥಾನದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಹೀಗಾಗಿ, ಸರಕಾರದ ತೀರ್ಮಾನ ಮೇಲ್ನೋಟಕ್ಕೆ ಸರಿಯಾಗಿದೆ. ಹೀಗಾಗಿ, ತಡೆಯಾಜ್ಞೆ ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ನ್ಯಾ. ಸುನೀಲ್ ದತ್ ಯಾದವ್ ಅವರ ಪೀಠದ ಮುಂದೆ ದೇವಸ್ಥಾನದ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಸರಕಾರದ ತೀರ್ಮಾನಕ್ಕೆ ತಡೆಯಾಜ್ಞೆ ನೀಡಲು ಪೀಠ ನಿರಾಕರಿಸಿತು.


Share It

You cannot copy content of this page