ಬೆಂಗಳೂರು: ನಗರದ ವೈಯಾಲಿಕಾವಲ್ ನಿವಾಸಿ ಮಹಾಲಕ್ಷ್ಮೀ ಕೊಲೆ ಪ್ರಕರಣದ ಆರೋಪಿ ಗುರುತು ಪತ್ತೆ ಮಾಡಿರುವ ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.
ಆರೋಪಿಗಾಗಿ ಹುಡುಕಾಟ ಮುಂದುವರೆದಿದ್ದು, ಶೀಘ್ರದಲ್ಲಿ ಬಂಧಿಸುತ್ತೇವೆ. ಆರೋಪಿ ಹೊರ ರಾಜ್ಯದವನು ಎಂಬ ಮಾಹಿತಿ ಲಭ್ಯವಾಗಿದೆ. ಆತ ಬೆಂಗಳೂರಿನಲ್ಲಿ ವಾಸವಾಗಿದ್ದ ಎಂಬುವುದು ತಿಳಿದುಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮಾಹಿತಿ ನೀಡಿದ್ದಾರೆ.
ಮೂರು ಹಿಂದೆ ವೈಯ್ಯಾಲಿ ಕಾವಲ್ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಶವವನ್ನು ಐವತ್ತೆರಡು ತುಂಡಿಗಳಾಗಿ ಕತ್ತರಿಸಿ, ಪ್ರಿಡ್ಜ್ ನಲ್ಲಿಡಲಾಗಿತ್ತು. ವಾಸನೆ ಬಂದ ಕಾರಣಕ್ಕೆ ಕುಟುಂಬಸ್ಥರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಬಂದು ನೋಡಿದಾಗ ಕೊಲೆಯಾದ ಬಗ್ಗೆ ಮಾಹಿತಿ ಸಿಕ್ಕಿತ್ತು.
ಎಂಟು ತಂಡಗಳನ್ನು ರಚನೆ ಮಾಡಿರುವ ಪೊಲೀಸರು, ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು. ಆಕೆಯ ಪತಿಯನ್ನು ಮೊದಲಿಗೆ ವಿಚಾರಣೆ ಮಾಡಿದ್ದು, ಆತ ಅಮಾಯಕ ಎಂದು ಗೊತ್ತಾಗಿದೆ. ನಂತರ ಆಕೆಯೊಂದಿಗೆ ಸಂಪರ್ಕದಲ್ಲಿದ್ದವರನ್ನಲ್ಲ ವಿಚಾರಣೆ ನಡೆಸಲಾಗಿದ್ದು, ಇದೀಗ ಆರೋಪಿ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ

