ಸಿ.ಟಿ. ರವಿ ಅವರನ್ನು ಬೆಳಗಾವಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

85270203
Share It

ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬೆಳಗಾವಿಯ ಪೊಲೀಸರು ಇಲ್ಲಿಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಗುರುವಾರ ಬಂಧನಕ್ಕೊಳಗಾಗಿದ್ದ ಸಿ.ಟಿ. ರವಿ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಲಾಗುತ್ತಿದೆ ಎನ್ನಲಾಗಿತ್ತು.

ಆದರೆ ರಾತ್ರಿಯಿಡೀ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸುತ್ತಾಡಿಸಿದ್ದ ಪೊಲೀಸರು ಕೊನೆಗೂ ಬೆಳಗಾವಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


Share It

You cannot copy content of this page