ನೆಲಮಂಗಲ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ 6 ಜನ ದುರ್ಮರಣ
ಬೆಂಗಳೂರು: ನೆಲಮಂಗಲ ಬಳಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ಆಅರು ಜನರು ದುರ್ಮರಣವನ್ನಪ್ಪಿರುವ ಘಟನೆ ನಡೆದಿದೆ.
ಟ್ರಕ್ ಮತ್ತು ಎಸ್ ಯುವಿ ಕಾರ್ ನಡುವೆ ಮಡೆದಿರುವ ಅಪಘಾತದಲ್ಲಿ ಕಾರು ಟ್ರಕ್ ನ ಕಳೆಗೆ ಸಿಲುಕಿದ್ದು, ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕಾರು ಬೆಂಗಳೂರಿನಲ್ಲಿ ನೆಲಸಿದ್ದ ಉದ್ಯಮಿಯೊಬ್ಬರಿಗೆ ಸೇರಿದ್ದು ಎಂದು ಹೇಳಲಾಗಿದೆ.
ವೀಕೆಂಡ್ ಮಜಾ ಸವಿಯಲು ನಗರದಿಂದ ಹೊರಗೆ ಹೋಗುತ್ತಿದ್ದಾಗ ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಘಟನೆ ನಡೆದಿದೆ. ಟಿ. ಬೇಗೂರು ಬಳಿಯ ರಸ್ತೆಯಲ್ಲಿ ಟ್ರಕ್ ಮತ್ತು ಕೆಎಂಎಫ್ ವಾಹನದ ನಡುವೆ ಸಿಲುಕಿದ ಕಾರು ಟ್ರಕ್ ಗೆ ಗುದ್ದಿದೆ. ಟ್ರಕ್ ಕಾರಿನ ಮೇಲೆ ಮಗುಚಿ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ.
ಸ್ಥಳೀಯರು ಮತ್ತು ಪೊಲೀಸರು ಕಾರಿನಲ್ಲಿ ಸಿಲುಕಿದ್ದವರನ್ನು ರಕ್ಷಣೆ ಮಾಡಿ, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದರಾದರೂ, ವೈದ್ಯರು ಆರು ಜನರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ನೆಲಮಂಗಲ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.