ಸಿಎಂ ಜತೆಗೆ ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಬಜೆಟ್ ಪೂರ್ವಭಾವಿ ಸಭೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಸಚಿವ ರಾಮಲಿಂಗ ರೆಡ್ಡಿ ಚರ್ಚೆ ನಡೆಸಿದರು.
ಸಭೆಯಲ್ಲಿ ಮುಂಬರುವ ಬಜೆಟ್ ನಲ್ಲಿ KSRTC ಸೇರಿದಂತೆ ಪ್ರಮುಖ ಸಾರಿಗೆ ನಿಗಮಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ನೀಡಬೇಕಾದ ಅನುದಾನ ಬಿಡುಗಡೆ ಮತ್ತು ಮುಜರಾಯಿ ದೇವಸ್ಥಾನಗಳ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿದರು.
ಶಕ್ತಿ ಯೋಜನೆಯ ಜಾರಿ ಸಂಬಂಧ ಸಾರಿಗೆ ಇಲಾಖೆ ಮುಂದಿರುವ ಸವಾಲುಗಳನ್ನು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದರು. ಇದೆಲ್ಲ ಸವಾಲುಗಳ ನಡುವೆ ಸಂಸ್ಥೆಯನ್ನು ಅಭಿವೃದ್ಧಿ ಕಡೆಗೆ ಕೊಂಡೊಯ್ಯಲು ಕೈಗೊಳ್ಳಬಹುದಾದ ವಿಷಯಗಳ ಚರ್ಚೆ ನಡೆಯಿತು.
ಸಭೆಯಲ್ಲಿ ಮುಖ್ಯಮಂತ್ರಿ ಅವರ ರಾಜಕೀಯ ಸಲಹೆಗಾರ ಗೋವಿಂದರಾಜು, ಸಾರಿಗೆ ಇಲಾಖೆ ಮತ್ತು ಹಣಕಾಸು ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.


