ಬಾಗಲಕೋಟೆ: ಕಾರು ಕ್ಯಾಂಟರ್ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ತಡರಾತ್ರಿ ನಡೆದಿದೆ.
ಅಪಘಾತದಲ್ಲಿ ಲಕ್ಷ್ಮಣ ವಡ್ಡರ್(55), ಬೈಲಪ್ಪ ಬಿರಾದಾರ್(45), ರಾಮಣ್ಣ ನಾಯಕ(50), ಚಾಲಕ ರಫಿಕ್ ಮುಲ್ಲಾ(25) ಎಂಬುವವರು ಸ್ಥಳದಲ್ಲೇ ಮೃಟಪಟ್ಟಿದ್ದಾರೆ. ಮೃತರು, ವಿಜಯಪುರ ಜಿಲ್ಲೆ ಬಿದರಕುಂದಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ.
ಕಾರು ಮುದ್ದೇಬಿಹಾಳದ ಕಡೆ ಹೊರಟ್ಟಿತ್ತು. ಕ್ಯಾಂಟರ್ ಮುದ್ದೇಬಿಹಾಳದಿಂದ ಹುನಗುಂದ ಕಡೆ ತೆರಳಿತ್ತು. ನಿದ್ದೆ ಮಂಪರಿನಿಂದ ಕ್ಯಾಂಟರ್ಗೆ ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಕ್ಯಾಂಟರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ಹೊಸಪೇಟೆ ಬಳಿಯ ಹುಲಿಗೆಮ್ಮನ ದೇವಸ್ಥಾನಕ್ಕೆ ಹೋಗಿ ದರ್ಶನ ಮುಗಿಸಿಕೊಂಡು ವಾಪಸ್ ಊರಿಗೆ ಹೊಗುವಾಗ ಕ್ಯಾಂಟರ್-ಕಾರು ಮುಖಾಮುಖಿ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.