ಬೆಂಗಳೂರು: ಕರ್ನಾಟಕದ ಎಲ್ಲಾ ಶಾಸಕರ ವೇತನ 40 ಸಾವಿರ ರೂ.ಯಿಂದ 80 ಸಾವಿರ ರೂ.ಗೆ ಏರಿಕೆಯಾಗಿದೆ.
ಜೊತೆಗೆ ವಿಧಾನಸಭಾಧ್ಯಕ್ಷರು ಮತ್ತು ವಿಧಾನಪರಿಷತ್ ಸಭಾಪತಿ ವೇತನ ಕೂಡ 75 ಸಾವಿರದಿಂದ 1.25 ಲಕ್ಷ ರೂಪಾಯಿಗೆ ಜಿಗಿದಿದೆ. ಇನ್ನು ಸಚಿವರ ವೇತನ 60 ಸಾವಿರದಿಂದ 1.25 ಲಕ್ಷ ರೂಪಾಯಿಗೆ ಏರಿಕೆ ಕಂಡಿದೆ.
ಮುಖ್ಯಮಂತ್ರಿಯ ವೇತನ ಸಹ 75 ಸಾವಿರದಿಂದ 1.50 ಲಕ್ಷ ರೂಪಾಯಿಗೆ ಹೆಚ್ಚಳವಾಗಿದೆ.
ಈ ಮೂಲಕ, ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ ಶೇಕಡ 100 ರಷ್ಟು ಹೆಚ್ಚಳವಾಗಿದೆ.
ಶಾಸಕರು, ವಿಧಾನಪರಿಷತ್ ಸದಸ್ಯರು, ವಿಧಾನ ಸಭಾಧ್ಯಕ್ಷರು, ವಿಧಾನಪರಿಷತ್ ಸಭಾಪತಿ, ವಿರೋಧ ಪಕ್ಷದ ನಾಯಕರು, ಮುಖ್ಯ ಸಚೇತಕರ ವೇತನ, ಭತ್ಯೆ ಹೆಚ್ಚಳದಿಂದ 50 ಕೋಟಿ ರೂಪಾಯಿ, ಮುಖ್ಯಮಂತ್ರಿ, ಸಚಿವರುಗಳ ವೇತನ ಭತ್ಯೆ ಹೆಚ್ಚಳದಿಂದ 10 ಕೋಟಿ ರೂಪಾಯಿ ಸೇರಿ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ 62 ಕೋಟಿ ರೂಪಾಯಿ ಹೆಚ್ಚುವರಿ ಹೊರೆ ಬೀಳಬಹುದು ಎಂದು ಅಂದಾಜಿಸಲಾಗಿದೆ.
ಶಾಸಕರ ವೇತನ ಮತ್ತು ಭತ್ಯೆಗಳನ್ನು 2015ರಲ್ಲಿ ಪರಿಷ್ಕರಿಸಿದ ಬಳಿಕ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022ರಲ್ಲಿ ಮತ್ತೆ ಪರಿಷ್ಕರಿಸಲಾಗಿತ್ತು.