ಬೆಂಗಳೂರು: ಆರ್ಸಿಬಿ ತಂಡ ಐಪಿಎಲ್-2025 ರ ಟ್ರೋಫಿ ಗೆದ್ದ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವಿಗೀಡಾಗಿರುವ ದುರಂತ ರಾಜ್ಯಾದ್ಯಂತ ಕೋಲಾಹಲ ಸೃಷ್ಟಿಸಿದೆ.
ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಹಲವರನ್ನು ರಾಜ್ಯಸರ್ಕಾರ ಅಮಾನತುಗೊಳಿಸಿತ್ತು. ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಶಂಕರ್ ಅವರು ಈ ಅವಘಡಕ್ಕೆ ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಕೆಎಸ್ಸಿಎ ಖಜಾಂಚಿ ಜೈರಾಮ್ ಕೂಡ ರಾಜೀನಾಮೆ ನೀಡಿದ್ದಾರೆ. ಕೆಎಸ್ಸಿಎ ಅಧ್ಯಕ್ಷರಿಗೆ ಇಬ್ಬರೂ ಸಹ ಕಳೆದ ಶುಕ್ರವಾರ ರಾತ್ರಿಯೇ ರಾಜೀನಾಮೆ ನೀಡಿರುವುದು ತಿಳಿದುಬಂದಿದೆ.