ಬೈಂದೂರು ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ನಿಧನ

Share It

ಕುಂದಾಪುರ : ಬೈಂದೂರು ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ (85) ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಅವರು ಕೆಲ ಸಮಯದಿಂದ ಬೆಂಗಳೂರಿನಲ್ಲಿ ವಾಸವಿದ್ದು ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ವರ್ಷಗಳ ಹಿಂದೆ ಪತ್ನಿ ನಿಧನರಾಗಿದ್ದರು. ಇಂದು ಸಂಜೆ 4:30ಕ್ಕೆ ಬನಶಂಕರಿ ಚಿತಾಗಾರದಲ್ಲಿ ಲಕ್ಷ್ಮೀನಾರಾಯಣ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ.

2008ರಲ್ಲಿ ಬೈಂದೂರು ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಅದಕ್ಕೂ ಮೊದಲು ಎರಡು ಸಲ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಉದ್ಯಮಿಯಾಗಿ ಹೆಸರು ಗಳಿಸಿದ್ದ ಇವರು ಸ್ನಾತಕೋತ್ತರ ಪದವಿ ಪಡೆದಿದ್ದರು.


Share It

You May Have Missed

You cannot copy content of this page