ರಾಜಕೀಯ ಸುದ್ದಿ

ಮುಡಾ ಅಧ್ಯಕ್ಷ ಕೆ.ಮರಿಗೌಡರಿಗೆ ಘೇರಾವ್ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು

Share It

ಮೈಸೂರು: ವಿವಿಧ ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಾಗತಕ್ಕೆ ಬಂದಿದ್ದ ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿ ಘೋಷಣೆ ಕೂಗಿದ್ದಾರೆ.

ನಿಮ್ಮಿಂದಲೇ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂದು ಕಾರು ಹತ್ತಿಸಿ ವಿಮಾನ‌ ನಿಲ್ದಾಣದಿಂದ ವಾಪಾಸ್ ಕಳುಹಿಸಿದ್ದಾರೆ. ಈ ಸಂದರ್ಭದಲ್ಲಿ ಮರೀಗೌಡ ಅವರು ಕಾರ್ಯಕರ್ತರನ್ನು ಸಮಾಧಾನಗೊಳಿಸಿ ಸಮಜಾಯಿಸಿ ನೀಡಲು ಮುಂದಾದರೂ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸಿ ವಾಪಸ್ ಕಳುಹಿಸಿದ್ದಾರೆ.

ಇಂದು ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ನಡೆಯಲಿರುವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಇನ್ನು ಇತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.


Share It

You cannot copy content of this page