ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ದಾಖಲು

Share It

ಬೆಂಗಳೂರು: ಚುನಾವಣಾ ಬಾಂಡ್‌ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕಾರಿ ಸಂಘರ್ಷ ಪರಿಷತ್‌ನ(ಜೆಎಸ್​ಪಿ) ಆದರ್ಶ ಆರ್. ಐಯ್ಯ‌ರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ದೂರು ಸಂಬಂಧ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ದೂರಿನ ಪ್ರತಿ & ದಾಖಲೆ ಠಾಣೆಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ.

ಬೆಂಗಳೂರಿನ ತಿಲಕ್​​ನಗರ ಠಾಣೆಗೆ ಕಳಿಸುವಂತೆ ಕೋರ್ಟ್​​ನ ಕಚೇರಿಗೆ 42ನೇ ಎಸಿಎಂಎಂ ಜಡ್ಜ್​ ಸೂಚನೆ ನೀಡಿದ್ದಾರೆ. ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್‌ ಕುಮಾರ್‌ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು ಸಲ್ಲಿಸಲಾಗಿದೆ.

2019 ಏಪ್ರಿಲ್‌ ನಿಂದ 2022ರ ಆಗಸ್ಟ್ ವರೆಗೆ ಉದ್ಯಮಿ ಅನಿಲ್ ಅಗಲ್‌ವಾಲ್ ಅವರ ಸಂಸ್ಥೆಯಿಂದ ಸುಮಾರು 230 ಕೋಟಿ ರೂ ಮತ್ತು ಅರೊಬಿಂದೋ ಫಾರ್ಮಸಿ ಸಂಸ್ಥೆಯಿಂದ 49 ಕೋಟಿ ರೂ.ನಷ್ಟು ಚುನಾವಣಾ ಬಾಂಡ್‌ ಗಳ ಮೂಲಕ ವಸೂಲಿ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.


Share It

You May Have Missed

You cannot copy content of this page