ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಡುವಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ದೆಹಲಿ ಪ್ರಯಾಣ ಬೆಳಸಲು ಸಜ್ಜಾಗಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶನಿವಾರ ಸಂಜೆಯೇ ದೆಹಲಿಗೆ ಹೊರಡಲಿದ್ದು, ಸಿಎಂ ಭಾನುವಾರ ಬೆಳಗ್ಗೆ ದೆಹಲಿಗೆ ಹೊರಡಲಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ಜತೆಗೆ ಈ ಇಬ್ಬರು ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯಲ್ಲಿ ನಡೆಯುತ್ತಿರುವ ವೋಟ್ ಚೋರಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಲು ಸಿಎಂ, ಡಿಸಿಎಂ ತೆರಳಿದ್ದು, ಭಾನುವಾರ ಸಂಜೆಯೇ ವಾಪಸಾಗಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ. ಆದರೆ, ಈ ವೇಳೆಯೇ ಕರ್ನಾಟಕ ರಾಜ್ಯ ರಾಜಕೀಯದ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
