ಹುಬ್ಬಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಯುವತಿ ಜತೆ ಅಸಭ್ಯ ವರ್ತನೆ; ಯುವಕನ ಬಂಧನ
ಹುಬ್ಬಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಯುವತಿಯ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಾರಿನಲ್ಲಿ ಹೋಗುತ್ತಿದ್ದ ಯುವತಿಗೆ ಬೈಕ್ ನಲ್ಲಿ ಬಂದ ಯುವಕನೊಬ್ಬ ಅವಾಚ್ಯವಾಗಿ ನಿಂದಿಸಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ಭಾರಿ ಆಕ್ರೋಶ ಸೃಷ್ಟಿಸಿತ್ತು. ಇದಕ್ಕೆ ಸಂಬಂಧಿಸಿ, ನವನಗರ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇದೀಗ ಪೊಲೀಸರು ಮುಕದುಮ್ ಹುಸೇನ್ ನಡುವಿನಮನಿ ಎಂಬ ಯುವಕನನ್ನು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಯುವತಿ ಕೆಲಸ ಮುಗಿಸಿ ವಾಪಸ್ ಮನೆಗೆ ತೆರಳುತ್ತಿದ್ದು, ಬೈರಿದೇವರಕೊಪ್ಪದ ಸನಾ ಕಾಲೇಜು ಬಳಿ ಸ್ಕೂಟಿಯಲ್ಲಿ ಬರುತ್ತಿದ್ದ ಯುವಕನೊಬ್ಬ ಅಡ್ಡಗಟ್ಟಿ, ಚುಡಾಯಿಸಿದ್ದಾನೆ. ವಿಡಿಯೋ ಮಾಡಲು ಮುಂದಾಗುತ್ತಿದ್ದಂತೆ, ಕೆಟ್ಟದಾಗಿ ನಿಂದಿಸಿ ಹೋಗಿದ್ದಾನೆ
ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪೊಲೀಸರು ಯುವತಿಯ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಯುವಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


