ಅಪರಾಧ ಸುದ್ದಿ

ಡಬಲ್ ಹಣ ಮಾಡುವ ಆಸೆಗೆ ಬಿದ್ದು 91 ಲಕ್ಷ ಕಳೆದುಕೊಂಡ ಮಹಿಳೆ

Share It

ಚಿಕ್ಕಮಗಳೂರು: ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ 91 ಲಕ್ಷ ಹಣ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಮಹಿಳೆಯೊಬ್ಬರು ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ತಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ. ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ಕರೆ ಬಂದಿದೆ. ಮಹಿಳೆಗೆ ವಂಚಕರು ತಮ್ಮ ಕಂಪನಿಯ ಮೂಲಕ ಹಣ ಹಾಕಿ ಡಬಲ್ ಪಡೆಯಿರಿ ಎಂದು ನಂಬಿಸಿದ್ದಾರೆ.

ಇದನ್ನು ನಂಬಿದ ಮಹಿಳೆ ಹಂತ ಹಂತವಾಗಿ ಹಣ ಕಳಿಸಿದ್ದಾರೆ. ಈ ಮೂಲಕ 91 ಲಕ್ಷದ 4315 ಹಣವನ್ನು ವಂಚಕರಿಗೆ ನೀಡಿ ಮೋಸ ಹೋಗಿದ್ದಾರೆ.
ಡಬಲ್ ಹಣ ಮಾಡುವ ಆಸೆಗೆ ಬಿದ್ದು 91 ಲಕ್ಷ ಹಣ ಕಳೆದುಕೊಂಡ ಮಹಿಳೆ ಇದೀಗ ಹಣ ವಾಪಸ್ ಕೊಡಿಸುವಂತೆ ದೂರು ಸಲ್ಲಿಸಿದ್ದಾರೆ.

ವಂಚನೆ ಕುರಿತು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರುವ ಲಿಂಕ್ ಕ್ಲಿಕ್ ಮಾಡದಂತೆ ಚಿಕ್ಕಮಗಳೂರು ಎಸ್ಪಿ ವಿಕ್ರಂ ಆಮಟೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.


Share It

You cannot copy content of this page