ಅಪರಾಧ ಸುದ್ದಿ

ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಉಪನ್ಯಾಸಕರ ವಿರುದ್ಧ ಕ್ರಮಕ್ಕೆ ಆದೇಶ

Share It

ರಾಮನಗರ: ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಕನಕಪುರ ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ವಿಶ್ವನಾಥ್​, ಲಕ್ಷ್ಮೀಶ್​, ನಾಗೇಶ್ ವಿರುದ್ಧ ಕ್ರಮ‌ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶಿಸಿದೆ.

ಅ.9ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿನಿಂದ ಅಕ್ಟೋಬರ್​​​ 5 ರಿಂದ 10ರವರೆಗೆ ಮಡಿಕೇರಿ ಪ್ರವಾಸ ಆಯೋಜಿಸಲಾಗಿತ್ತು. ಪ್ರವಾಸದಲ್ಲಿ ಪ್ರಾಂಶುಪಾಲರು ಬಿಯರ್​ ಕುಡಿದಿದ್ದಾರೆ. ಬಳಿಕ ಮೂವರು ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿ ಕೂಡಿಹಾಕಿ ಬಲವಂತವಾಗಿ ಬಿಯರ್​ ಕುಡಿಸಿದ್ದಾರೆ. ಅಲ್ಲದೇ, ತಮ್ಮ ಜೊತೆ ಡ್ಯಾನ್ಸ್​ ಮಾಡುವಂತೆ ಬಲವಂತ ಮಾಡಿದ್ದಾರೆ ಎನ್ನಲಾಗಿದೆ.

ಪ್ರವಾಸದಿಂದ ಕಾಲೇಜಿಗೆ ಬಂದ ಬಳಿಕ ವಿದ್ಯಾರ್ಥಿನಿಯರು ನಡೆದ ಘಟನೆ ಬಗ್ಗೆ ಮಹಿಳಾ ಉಪನ್ಯಾಸಕರಿಗೆ ಹೇಳಿದ್ದಾರೆ. ಅದಕ್ಕೆ ಮಹಿಳಾ ಉಪನ್ಯಾಸಕಿಯರು ಕಾಲೇಜು ಅಂದಮೇಲೆ ಇದು ಕಾಮನ್ ಎಂದಿದ್ದಾರೆ. ಆದರೆ, ಈ ವಿಚಾರ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗಕ್ಕೆ ತಿಳಿದಿದೆ.

ವಿಚಾರ ತಿಳಿದ ಕೂಡಲೇ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗ, ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದು ಉಪನ್ಯಾಸಕರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ. ಅಲ್ಲದೇ ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.


Share It

You cannot copy content of this page