ಬೆಂಗಳೂರು: ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡ್ತಿದ್ದ ವಿದೇಶಿ ಪೆಡ್ಲರ್ಸ್ಗಳನ್ನು ಕೇಂದ್ರ ಅಪರಾಧ ವಿಭಾಗದ (CCB) ಮಾದಕದ್ರವ್ಯ ನಿಗ್ರಹ ದಳ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರಿಂದ 9 ಲಕ್ಷ ಮೌಲ್ಯದ 82 ಗ್ರಾಂ ಎಂಡಿಎಮ್ಎ ಕ್ರಿಸ್ಟಲ್ ವಶಕ್ಕೆ ಪಡೆದಿದ್ದಾರೆ. ಬಂಧಿತರು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಒಂದು ಗ್ರಾಂ ಎಂಡಿಎಂಎ ಕ್ರಿಸ್ಟಲ್ ಅನ್ನು 8 ರಿಂದ 10 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಬಂದಿದ್ದಾರೆ. ಬಂಧಿತರ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.